ಶಾಸಕ ಹಾಗೂ ನಗರಸಭೆ ಸದಸ್ಯರ ನಡುವೆ ಮಾತಿನ ಚಕಮಕಿ - Tipatur
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7873267-thumbnail-3x2-mng.jpg)
ತುಮಕೂರು: ಅಭಿವೃದ್ಧಿ ಕಾರ್ಯಕ್ರಮದ ಕುರಿತ ಸಭೆ ಕುರಿತು ತಿಪಟೂರು ನಗರಸಭಾ ಸದಸ್ಯರು ಮತ್ತು ತಿಪಟೂರು ಶಾಸಕ ನಾಗೇಶ್ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ತಿಪಟೂರು ನಗರದ ವಿದ್ಯಾನಗರ 14ನೇ ವಾಡ್೯ ರಸ್ತೆ ಕಾಮಗಾರಿ ಉದ್ಘಾಟನೆ ವೇಳೆ ಘಟನೆ ನಡೆದಿದೆ. ಸ್ಥಳೀಯ ಜನಪ್ರತಿನಿಧಿಗಳಿಗೆ ಮಾಹಿತಿ ನೀಡದೆ, ಉದ್ಘಾಟನಾ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಿಪಟೂರು ನಗರಸಭೆ ಸದಸ್ಯ ಯೋಗೇಶ್ ಏರುಧ್ವನಿಯಲ್ಲಿ ಮಾತನಾಡಿದ್ದರು. ಈ ವೇಳೆ ಶಾಸಕ ನಾಗೇಶ್ ಕೂಡ ಮಧ್ಯಪ್ರವೇಶಿಸಿದ್ದು, ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತ ತಲುಪಿತು.