ಅಥಣಿಯಲ್ಲಿ ಬಡ ಜನರ ಮನೆಬಾಗಿಲಿಗೆ ತೆರಳಿ ಉಚಿತವಾಗಿ ದಿನಸಿ ವಸ್ತುಗಳ ವಿತರಣೆ
🎬 Watch Now: Feature Video
ಕೊರೊನಾ ವೈರಸ್ ಮುಂಜಾಗ್ರತೆ ಹಿನ್ನೆಲೆಯಲ್ಲಿ ಲಾಕ್ಡೌನ್ ಮುಂದುವರೆದಿದೆ. ಈ ನಿಟ್ಟಿನಲ್ಲಿ ಜನರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ತಡೆಯಲು ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿಗೊಳಿಸಿದ ಬೆನ್ನಲ್ಲೇ ಬಡ ಮತ್ತು ಕೂಲಿಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹುತೇಕ ಕುಟುಂಬಗಳಿಗೆ ಕೆಲಸವಿಲ್ಲದೆ, ಹಣ ಇಲ್ಲದಂತಾಗಿದ್ದು ಬಡ ಜನರು ಊಟಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸಮಾಜ ಸೇವಕ ಸುಂದರ ಸೌದಾಗರ ಮತ್ತು ಅವರ ಸ್ನೇಹಿತರು, 200ಕ್ಕೂ ಹೆಚ್ಚು ಕುಟುಂಬಗಳಿಗೆ ಅಗತ್ಯ ಸಾಮಗ್ರಿ ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ವೇಳೆ ಅಥಣಿ ಡಿವೈಎಸ್ಪಿ ಎಸ್.ವಿ ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡರ ಉಪಸ್ಥಿತರಿದ್ದರು.