ಕೊರೊನಾದಿಂದ ಆಯನೂರು ಮಂಜುನಾಥ್ ಗುಣಮುಖ; ವಿಡಿಯೋ ಮೂಲಕ ಧನ್ಯವಾದ - Shivamogga latest news
🎬 Watch Now: Feature Video
ಶಿವಮೊಗ್ಗ: ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಖಾಸಗಿ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಮನೆಗೆ ವಾಪಸಾಗಿದ್ದಾರೆ. ಹಾಗಾಗಿ ತಮ್ಮ ಆರೋಗ್ಯದ ಬಗ್ಗೆ ಬೇಗ ಗುಣಮುಖರಾಗುವಂತೆ ಹಾರೈಸಿದ ಅಭಿಮಾನಿಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ಚಿಕಿತ್ಸೆ ನೀಡಿದ ಆಸ್ಪತ್ರೆ ಸಿಬ್ಬಂದಿಗೆ, ಜಿಲ್ಲಾಡಳಿತ ಹಾಗೂ ಜಿಲ್ಲಾಧಿಕಾರಿಗೆ ವಿಡಿಯೋ ಮೂಲಕ ಧನ್ಯವಾದಗಳನ್ನ ತಿಳಿಸಿದ್ದಾರೆ.