ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆ : ರಂಗೋಲಿಯಲ್ಲಿ ಅರಳಿದ ಮಹಾನ್ ನಾಯಕರು - ಧಾರವಾಡದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14268989-thumbnail-3x2-bin.jpg)
ಧಾರವಾಡ : ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಧಾರವಾಡದಲ್ಲಿ ರಂಗೋಲಿ ಹಾಕುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಪಕ್ಕದ ಕಾರ್ಗಿಲ್ ಸ್ಥೂಪದ ಬಳಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಹಾನ್ ವ್ಯಕ್ತಿಗಳ ಚಿತ್ರಗಳು ರಂಗೋಲಿಯಲ್ಲಿ ಅರಳಿದ್ದವು. ರಂಗೋಲಿ ಉತ್ಸವದಲ್ಲಿ ಸ್ಪರ್ಧಿಗಳು ಭಾಗವಹಿಸಿ ಬಗೆ ಬಗೆಯ ರಂಗೋಲಿ ಬಿಡಿಸಿದರು.