ರಾಜ್ಯಾದ್ಯಂತ ಗಣಿಗಳ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಬಿ.ವೈ. ವಿಜಯೇಂದ್ರ - ಬಿ ವೈ ವಿಜಯೇಂದ್ರ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಕಲಬುರಗಿ: ಶಿವಮೊಗ್ಗ ಜಿಲೆಟಿನ್ ಸ್ಫೋಟ ಪ್ರಕರಣವು ಒಂದು ರೀತಿಯ ಎಚ್ಚರಿಕೆ ಗಂಟೆ, ಇನ್ನೂ ರಾಜ್ಯಾದ್ಯಂತ ಗಣಿಗಳ ಬಗ್ಗೆ ಸರ್ಕಾರ ಗಮನ ಹರಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು ಎನ್ನುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಆದ್ರೆ ತನಿಖೆ ನಂತರ ಸಂತ್ಯಾಂಶ ಗೊತ್ತಾಗಲಿದೆ ಎಂದರು. ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಇತರ ಜನಪ್ರತಿನಿಧಿಗಳು ಘಟನಾ ಸ್ಥಳದಲ್ಲಿದ್ದಾರೆ.