ಉಡುಪಿಯ ಚಿರಾಗ್ಗೆ ಒಲಿದು ಬಂತು 'ಅರ್ಜುನ ಪ್ರಶಸ್ತಿ' - Udupi News
🎬 Watch Now: Feature Video
ಉಡುಪಿ: ಉಚ್ಚಿಲ ಮೂಲದ ಚಿರಾಗ್ ಚಂದ್ರಶೇಖರ್ ಶೆಟ್ಟಿ ಅವರಿಗೆ ಅರ್ಜುನ ಪ್ರಶಸ್ತಿ ಒಲಿದು ಬಂದಿದೆ. ಕಾಮನ್ವೆಲ್ತ್ ಪಂದ್ಯಾಟದಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗಳಿಸಿದ್ದ ಬ್ಯಾಡ್ಮಿಂಟನ್ ಆಟಗಾರ ಚಿರಾಗ್, ಇದೀಗ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ರಂಗದಲ್ಲಿ ಮಿಂಚುತ್ತಿದ್ದಾರೆ. ಮುಂಬೈನಲ್ಲೇ ಶಿಕ್ಷಣ ಪಡೆದು ನೆಲೆಸಿರುವ ಇವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಡಿಜಿಟಲ್ ಫ್ಲಾಟ್‌ಫಾರ್ಮ್ ಮೂಲಕ ಪ್ರಶಸ್ತಿ ಸ್ವೀಕರಿಸಿದ್ದಾರೆ.