ಬಿರುಗಾಳಿ ಮಳೆಗೆ ಧರೆಗುರುಳಿದ ಬಾಳೆ:ಕಂಗಾಲಾದ ರೈತರು - ವರುಣನ ಆರ್ಭಟಕ್ಕೆ ಕೊಚ್ಚಿ ಹೋಯ್ತು ರೈತನ ಬದುಕು
🎬 Watch Now: Feature Video
ನಿನ್ನೆ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ನಂಜನಗೂಡು ತಾಲೂಕಿನ ಶಿರಮಳ್ಳಿ ಸುತ್ತಮುತ್ತ ಕಟಾವಿಗೆ ಬಂದಿದ್ದ ಸುಮಾರು 50 ಎಕರೆ ಬಾಳೆ ನಷ್ಟವಾಗಿದ್ದು,ಸಾಲ ಮಾಡಿ ಬೆಳೆದ ಬೆಳೆ ಕೈಗೆ ಸಿಗಲಿಲ್ಲ ಎಂದು ರೈತರು ಕಂಗಾಲಾಗಿದ್ದಾರೆ. ಬಿರುಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ಈ ಘಟನೆ ನಡೆದರೂ ಸ್ಥಳಕ್ಕೆ ಯಾವುದೇ ಕೃಷಿ ಅಧಿಕಾರಿಗಳು ಬಾರದೆ ಇರುವುದನ್ನು ಕಂಡಿಸಿ ರೈತರ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ