ಬಂಟ್ವಾಳ: ಪಣೋಲಿಬೈಲು ಕ್ಷೇತ್ರಕ್ಕೆ ನಟಿ ತಾರಾ ಭೇಟಿ - Tara Chairperson of Karnataka Forest Development Corporation
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10125969-668-10125969-1609838687797.jpg)
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಕುಟುಂಬ ಸಮೇತರಾಗಿ ಸೋಮವಾರ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಇಲ್ಲಿಗೆ ಬಂದಿದ್ದು, ಪಣೋಲಿಬೈಲಿನ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದರು. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್, ಶ್ರೀ ಆದಿಮಾಯೆ ಮಹಾಲಕ್ಮೀ ಮಂದಿರದ ಪಾತ್ರಿ ರಾಜೇಶ್, ಬೆಂಗಳೂರು ಉದ್ಯಮಿ ಗಣೇಶ್, ನಟ ಹರೀಶ್ ಆಚಾರ್ಯ, ಜೀವನ ರತನ್, ಅರ್ಚಕ ವರ್ಗ, ಸಿಬ್ಬಂದಿ ಹಾಜರಿದ್ದರು.