ಕೋವಿಡ್ ಹಾಟ್ಸ್ಪಾಟ್ ಆದ ಬಂಟ್ವಾಳ: ಕಗ್ಗಂಟಾದ ಸೋಂಕಿನ ಮೂಲ - ಕೊರೊನಾ ವೈರಸ್
🎬 Watch Now: Feature Video
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬಂಟ್ವಾಳದಲ್ಲಿ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈವರೆಗೆ ಒಟ್ಟು 19 ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 12 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದರೆ, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವನ್ನಪ್ಪಿದ ಇಬ್ಬರು ಬಂಟ್ವಾಳದವರಾಗಿದ್ದು ಇವರಿಗೆ ಯಾವ ಮೂಲದಿಂದ ಕೊರೊನಾ ಬಂತೆಂಬುದು ಕಗ್ಗಂಟಾಗಿದೆ. ಈ ನಡುವೆಯೆ ಇವರುಗಳ ಸಂಪರ್ಕದಿಂದ ಮೂವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕಾರಣದಿಂದ ಬಂಟ್ವಾಳ ಪ್ರಕರಣ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಮತ್ತಷ್ಟು ಮಾಹಿತಿ ನೀಡಿದ್ದಾರೆ.