ಪಶು ವೈದ್ಯೆ ಮೇಲಿನ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಬಸವಕಲ್ಯಾಣದಲ್ಲಿ ಕ್ಯಾಂಡಲ್ ಮಾರ್ಚ್ - ತೆಲಂಗಾಣ ಪಶು ವೈದ್ಯ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಸುದ್ದಿ
🎬 Watch Now: Feature Video

ಬಸವಕಲ್ಯಾಣ: ತೆಲಂಗಾಣದಲ್ಲಿ ನಡೆದ ಪಶು ವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ನಗರದಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿ, ಶ್ರದ್ದಾಂಜಲಿ ಸಲ್ಲಿಸಲಾಯಿತು. ನಗರದ ಗಾಂಧಿ ವೃತ್ತದಿಂದ ಮುಖ್ಯ ರಸ್ತೆ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ನಗರ ಠಾಣೆ ಪಿಎಸ್‌ಐ ಸುನೀಲಕುಮಾರ ಸೇರಿದಂತೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು, ಯುವಕರು ಪಾಲ್ಗೊಂಡಿದ್ದರು. ಅತ್ಯಾಚಾರಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.