ಮೆಕ್ಕೆಜೋಳ ಖರೀದಿ ಕೇಂದ್ರ ತೆರೆದು ಸರ್ಕಾರವೇ ಖರೀದಿಸಬೇಕು; ಹೆಚ್.ಆರ್ ಬಸವರಾಜಪ್ಪ ಆಗ್ರಹ - ಹೆಚ್.ಆರ್ ಬಸವರಾಜಪ್ಪ ಸುದ್ದಿಗೋಷ್ಠಿ
🎬 Watch Now: Feature Video
ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಿ ರೈತರಿಂದ ಮೆಕ್ಕೆಜೋಳ ಖರೀದಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ ಒತ್ತಾಯಿಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಜಾಬ್ ಸರ್ಕಾರದಂತೆ ರಾಜ್ಯ ಸರ್ಕಾರವು ಕೂಡ ಕೃಷಿ ಉತ್ಪನ್ನಗಳನ್ನು ಎಂಎಸ್ಪಿ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿ ಮತ್ತು ಮಾರಾಟ ಮಾಡುವುದು ಅಪರಾಧವೆಂದು ಘೋಷಿಸಬೇಕು ಹಾಗೂ ಕೇರಳ ಸರ್ಕಾರದಂತೆ ರಾಜ್ಯ ಸರ್ಕಾರವು ಸಹ ತರಕಾರಿ ಬೆಲೆಗಳಿಗೆ ಬೆಲೆ ನಿಗದಿ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತಂದಿರುವ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು. ಹಾಗೇಯೇ ಮೆಕ್ಕೆಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ 1850 ರೂ ಎಂದು ನಿಗದಿ ಮಾಡಿರುವುದು ಅವೈಜ್ಞಾನಿಕವಾಗಿದೆ. ಆದರಿಂದ ಕ್ವಿಂಟಾಲ್ ಒಂದಕ್ಕೆ 3000 ರೂ. ನಿಗದಿ ಮಾಡಿ ತಕ್ಷಣವೇ ಖರೀದಿ ಕೇಂದ್ರ ತೆರೆದು ಮೆಕ್ಕೆಜೋಳ ಖರೀದಿಸಬೇಕು ಎಂದು ಆಗ್ರಹಿಸಿದರು.