ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹ

🎬 Watch Now: Feature Video

thumbnail
ಗೋಕಾಕ್​ ಕ್ಷೇತ್ರದ ಉಪಚುನಾವಣೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಬಸವಣೆಪ್ಪ ಕಂಬಾರ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, 2008ಕ್ಕೂ ಮುನ್ನ ಗೋಕಾಕ್​ ಕ್ಷೇತ್ರ 40 ವರ್ಷ ಪರಿಶಿಷ್ಟ ಪಂಗಡ ವರ್ಗಕ್ಕೆ ಮೀಸಲಾಗಿತ್ತು. 2008ರಿಂದ ಈ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ಟಿಕೆಟ್ ನೀಡದೆ ಕಾಂಗ್ರೆಸ್ ಮೂರು ಬಾರಿ ರಮೇಶ್​ ಜಾರಕಿಹೊಳಿಗೆ ಟಿಕೆಟ್ ನೀಡಿತ್ತು. ಇದೀಗ ರಮೇಶ್​ ಅನರ್ಹರಾಗಿದ್ದು, ಗೋಕಾಕ್​ ಕ್ಷೇತ್ರದಲ್ಲಿ ಉಪ‌ಚುನಾವಣೆ ಎದುರಾಗಿದೆ. ಈ ಸಲವಾದರೂ ಕಾಂಗ್ರೆಸ್ ನಾಯಕರು ಸಾಮಾನ್ಯ ವರ್ಗದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು. ಈಗಾಗಲೇ‌ 6 ಜನ ಸಾಮಾನ್ಯ ವರ್ಗದ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ 1 ಲಕ್ಷ ಲಿಂಗಾಯತರು,‌ 50 ಸಾವಿರ ಮುಸ್ಲಿಮರಿದ್ದಾರೆ. ಹೀಗಾಗಿ ಸಾಮಾನ್ಯ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು‌ ಬಸವಣೆಪ್ಪ ಪಕ್ಷದ ನಾಯಕರಿಗೆ ಆಗ್ರಹಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.