ವಿಡಿಯೋ: ನೂತನ ಸಿಎಂ ಆಗಿ ಆಯ್ಕೆಯಾಗ್ತಿದ್ದಂತೆ ಬಿಎಸ್‌ವೈ ಕಾಲಿಗೆರಗಿ ಆಶೀರ್ವಾದ ಪಡೆದ ಬೊಮ್ಮಾಯಿ - karnataka politics
🎬 Watch Now: Feature Video
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ 20ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಲಿಂಗಾಯತ ಸಮುದಾಯದ ನಾಯಕನಿಗೆ ಮುಖ್ಯಮಂತ್ರಿ ಪದವಿ ನೀಡಿದೆ. ಕರ್ನಾಟಕದ ಮಾಜಿ ಸಿಎಂ ಎಸ್.ಆರ್ ಬೊಮ್ಮಾಯಿಯವರ ಮಗನಾದ ಬಸವರಾಜ ಬೊಮ್ಮಾಯಿ ಕರುನಾಡಿನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಬೊಮ್ಮಾಯಿ ಮುಂದಿನ 1 ವರ್ಷ 10 ತಿಂಗಳು ರಾಜ್ಯಭಾರ ನಡೆಸಲಿದ್ದಾರೆ.