ಪಿಲ್ಲೆಕಮ್ಮ ದೇವಿ ದರ್ಶನಕ್ಕೆ ಬಂದ ಜಾಂಬವಂತ: ಬೆಡತ್ತೂರು ಗ್ರಾಮಸ್ಥರಲ್ಲಿ ಆತಂಕ - ದೇವಸ್ಥಾನದಲ್ಲಿ ಕರಡಿ ಪ್ರತ್ಯಕ್ಷ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9788036-467-9788036-1607273991054.jpg)
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬೆಡತ್ತೂರು ಗ್ರಾಮದ ಪಿಲ್ಲೆಕಮ್ಮ ದೇವಸ್ಥಾನದ ಬಳಿ ದೈತ್ಯ ಕರಡಿಯೊಂದು ಕಾಣಿಸಿಕೊಂಡಿದೆ. ಕರಡಿ ದೇವಸ್ಥಾನ ಪ್ರವೇಶಿಸುತ್ತಿರುವ ವಿಡಿಯೋವನ್ನು ಗ್ರಾಮಸ್ಥರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರತಿನಿತ್ಯ ಈ ಭಾಗದಲ್ಲಿ ಒಂದಿಲ್ಲೊಂದು ಕಡೆ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಈ ಕುರಿತು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಅನೇಕ ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅಪಾಯ ಸಂಭವಿಸುವ ಮುಂಚೆ ಅರಣ್ಯಾಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
TAGGED:
ದೇವಸ್ಥಾನದಲ್ಲಿ ಕರಡಿ ಪ್ರತ್ಯಕ್ಷ