ಅಂಜನಾದ್ರಿ ಪರ್ವತದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಪ್ರತ್ಯಕ್ಷನಾದ ಜಾಂಬವಂತ - Anjaneya Temple of the Anjanadri Mountain of Koppal
🎬 Watch Now: Feature Video
ಕೊಪ್ಪಳ: ಗಂಗಾವತಿ ತಾಲೂಕಿನ ಪೌರಾಣಿಕ ಹಿನ್ನೆಲೆಯ ಅಂಜನಾದ್ರಿ ಪರ್ವತದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕರಡಿ ಕಾಣಿಸಿಕೊಂಡಿದೆ. ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ಕರಡಿ ಬಂದಿದೆ. ಆಂಜನೇಯನ ದೇವಸ್ಥಾನದ ಮುಂಭಾಗದಲ್ಲಿಯೇ ಕರಡಿ ಬಂದಿರುವುದನ್ನು ಅಲ್ಲಿದ್ದ ಕೆಲಸಗಾರರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚಿಗೆ ಇಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿತ್ತು. ಈಗ ಮತ್ತೆ ದೇವಸ್ಥಾನದ ಮುಂದೆ ಕರಡಿ ಪ್ರತ್ಯಕ್ಷವಾಗಿದ್ದು, ಆತಂಕ ಮೂಡಿಸಿದೆ. ಚಿರತೆ, ಕರಡಿಗಳು ಆಗಾಗ ಕಾಣಿಸಿಕೊಳ್ಳುತ್ತಿದ್ದು,ಕೂಡಲೇ ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.