ರಾಜ್ಯ ಕಾಂಗ್ರೆಸ್‌ಗೆ ನೂತನ ಸಾರಥಿ ಯಾರು? - ಹೈಕಮಾಂಡ್ಗೆ ಪರಮೇಶ್ವರ್ ವರದಿ
🎬 Watch Now: Feature Video
ಬೆಂಗಳೂರು: ರಾಜ್ಯ ಕಾಂಗ್ರೆಸ್‌ಗೆ ಸಾರಥಿ ಆಯ್ಕೆ ಬಗ್ಗೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಎರಡೂ ಬಣ ಒಪ್ಪಿಕೊಳ್ಳುವಂತಹ ವ್ಯಕ್ತಿಗೆ ಜವಾಬ್ದಾರಿ ನೀಡುವ ಬಗ್ಗೆ ಎಐಸಿಸಿ ಹಂತದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಬಣದಿಂದ ಎಂ.ಬಿ. ಪಾಟೀಲ್ ಹಾಗೂ ಹಿರಿಯರ ಬಣದಿಂದ ಡಿ.ಕೆ.ಶಿವಕುಮಾರ್ ಹೆಸರು ಅಂತಿಮವಾಗಿ ಪ್ರಸ್ತಾಪವಾಗಿತ್ತು. ಇವರಿಬ್ಬರಲ್ಲಿ ಒಬ್ಬರನ್ನು ಒಮ್ಮತದಿಂದ ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದು ದೆಹಲಿಯಿಂದ ಆಗಮಿಸಿದ್ದ ಎಐಸಿಸಿ ಪ್ರತಿನಿಧಿಗಳು ಹೈಕಮಾಂಡ್ಗೆ ವಿವರಿಸಿದ್ದಾರೆ ಎನ್ನಲಾಗ್ತಿದೆ.