ಶಾಲೆ-ಕಾಲೇಜುಗಳು ಪುನಾರಂಭ.. ಸುಳ್ಯ, ಕಡಬದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪರಿಶೀಲನೆ

By

Published : Jan 1, 2021, 7:19 PM IST

thumbnail
ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಸೂಚನೆಯಂತೆ ಇಂದಿನಿಂದ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಹಾಗೂ ವಿದ್ಯಾಗಮ ತರಗತಿಗಳು ಆರಂಭವಾಗಿವೆ. ಈ ಹಿನ್ನೆಲೆ ಸುಳ್ಯ, ಕಡಬ ತಾಲೂಕುಗಳಲ್ಲಿ ಕೂಡ ಶಾಲಾ - ಕಾಲೇಜುಗಳು ಆರಂಭವಾಗಿವೆ. ಶೇ.80% ವಿದ್ಯಾರ್ಥಿಗಳು ಉತ್ಸಾಹದಿಂದ ತರಗತಿಗೆ ಹಾಜರಾಗಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಬ್ಯಾಂಡ್, ಆರತಿ ಬೆಳಗುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಯಿತು. ತರಗತಿ ಆರಂಭಕ್ಕೂ ಮುಂಚೆ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್​ ಮಾಡಲಾಗಿದೆ. ಹಾಗೂ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮೊದಲು ಅವರ ತಾಪಮಾನ ಪರೀಕ್ಷಿಸಿ ತರಗತಿಗೆ ಪ್ರವೇಶ ನೀಡಲಾಗಿದೆ. ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲಾ ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.