ಭಾರತ್ ಬಂದ್ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ - ಭಾರತ್ ಬಂದ್ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
🎬 Watch Now: Feature Video
ಕೃಷಿ ಕಾಯ್ದೆ ತಿದ್ದುಪಡಿ ಹಾಗೂ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಇಂದು ಕರೆ ನೀಡಿರುವಂತಹ ಭಾರತ ಬಂದ್ ಗೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ ಪ್ರದೇಶಗಳಲ್ಲಿ ಎಂದಿನಂತೆ ಜನಜೀವನ ಪ್ರಾರಂಭವಾಗಿದ್ದರೆ, ನಗರದ ಹೊರವಲಯದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಕೂಡ ಭರ್ಜರಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಈ ಬಂದ್ ಗೆ ಜಿಲ್ಲೆಯಲ್ಲಿ 12 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದರೂ ಸಹ ಈವರೆಗೆ ಯಾರೂ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ.