ಕೊಪ್ಪಳದಲ್ಲಿ ಹೇಗಿದೆ ಬಂದ್‌ಗೆ ಪ್ರತಿಕ್ರಿಯೆ?: ಇಲ್ಲಿದೆ ಗ್ರೌಂಡ್ ರಿಪೋರ್ಟ್ - ಭಾರತ್ ಬಂದ್‌ಗೆ ಕೊಪ್ಪಳದಲ್ಲಿ ಸಹಕರಿಸದ ಕೆಎಸ್ಆರ್ಟಿಸಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9802690-thumbnail-3x2-kpl.jpg)
ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಇಂದು ಕರೆ ನೀಡಲಾಗಿರುವ ಭಾರತ್ ಬಂದ್‌ಗೆ ಕೊಪ್ಪಳದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿವೆ. ವ್ಯಾಪಾರ ವಹಿವಾಟು ಸುಗಮವಾಗಿ ಸಾಗಿದೆ. ಜನರ ಓಡಾಟ ಸಹಜವಾಗಿದೆ. ಖಾಸಗಿ ಹಾಗೂ ಸಾರಿಗೆ ಸಂಸ್ಥೆಯ ಬಸ್ಗಳು ಓಡಾಟ ನಡೆಸುತ್ತಿವೆ. ರೈತ ಸಂಘಟನೆಗಳ ಕಾರ್ಯಕರ್ತರು ಸಾಂಕೇತಿಕ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಆದರೆ ಬೆಳಗ್ಗೆ ಮಾತ್ರ ರೈತಪರ ಸಂಘಟನೆಯ ಕೆಲವು ಕಾರ್ಯಕರ್ತರು ನಗರದ ಬಸ್ ನಿಲ್ದಾಣದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಳಿದಂತೆ ಬಂದ್ ಬಿಸಿ ಕೊಪ್ಪಳಕ್ಕೆ ತಟ್ಟಿಲ್ಲ ಎನ್ನಬಹುದು.