ಅಡ್ಯಾರ್-ಕಣ್ಣೂರಿನಲ್ಲಿ ಸಿಎಎ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ - latest protest news from manglore
🎬 Watch Now: Feature Video
ಸಿಎಎ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಇಡೀ ಶಹಾ ಗಾರ್ಡನ್ ಮೈದಾನವು ರಾಷ್ಟ್ರ ಧ್ವಜವನ್ನು ಹಿಡಿದ ಪ್ರತಿಭಟನಾಕಾರರಿಂದ ತುಂಬಿ ತುಳುಕಿತು. ಬೈಕ್ ರ್ಯಾಲಿ ಮೂಲಕ ಪ್ರತಿಭಟನಾಕಾರರು ಬಹಳ ಹುರುಪಿನಿಂದ ಸಮಾವೇಶಕ್ಕೆ ಆಗಮಿಸಿದ್ದರು. ಮೈದಾನದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಪ್ರತಿಭಟನೆಗೆ ಭಾರೀ ಸಂಖ್ಯೆಯಲ್ಲಿ ಜನ್ರು ಆಗಮಿಸುತ್ತಿದ್ದರಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯ ಕಂಡು ಬಂತು.