ಕುಟುಂಬದ ಐವರು ಒಂದೇ ಬೈಕ್ನಲ್ಲಿ ಪ್ರಯಾಣಿಸುವಾಗ ಅಪಘಾತ: ಸಿಸಿ ಕ್ಯಾಮರಾದಲ್ಲಿ ಘಟನೆ ಸೆರೆ - Bike accident scene captured on CC camera
🎬 Watch Now: Feature Video
ಗಂಡ, ಹೆಂಡತಿ ಮತ್ತು ಮೂವರು ಚಿಕ್ಕ ಮಕ್ಕಳು ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ನಡೆದ ಘಟನೆ ಬೆಂಗಳೂರಿನ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 4ರ ರಾಯರಪಾಳ್ಯ ಗೇಟ್ ಬಳಿ ನಡೆದಿದೆ. ಈ ಕುಟುಂಬ ಬೆಂಗಳೂರಿನಿಂದ ದಾವಣಗೆರೆಗೆ ಹೋಗುತ್ತಿತ್ತು ಎನ್ನಲಾಗಿದೆ. ಮುಂಬದಿಯಿಂದ ಸಂಚರಿಸುತ್ತಿದ್ದ ಕಾರು ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಹಿಂದಿದ್ದ ಬರುತ್ತಿದ್ದ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವೇಳೆ ವೇಗವಾಗಿ ಸಂಚರಿಸುತ್ತಿದ್ದ ಬೈಕ್‌ನಲ್ಲಿದ್ದ ಐವರೂ ಕೂಡಾ ಕೆಲವೇ ಅಂತರಗಳಲ್ಲಿ ನೆಲಕ್ಕೆ ಬಿದ್ದಿದ್ದಾರೆ. ಸುದೈವವಶಾತ್ ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಮಗುವೊಂದು ಚಿಂತಾಜನಕ ಸ್ಥಿತಿಯಲ್ಲಿದ್ದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ತಿರುವು ಹಾಗೂ ಸರ್ವಿಸ್ ರೋಡ್ ಅವ್ಯವಸ್ಥೆ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ. ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
Last Updated : Dec 16, 2020, 10:43 AM IST