ಬೈಕ್ಗಳ ಮುಖಾಮುಖಿ ಡಿಕ್ಕಿ: ಅಪಘಾತ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಭೀಕರ ಅಪಘಾತ ಸಿಸಿಟಿವಿಯಲ್ಲಿ ಸೆರೆ
🎬 Watch Now: Feature Video
ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿ ಹೊಡೆ ಭೀಕರ ರಸ್ತೆ ಅಪಘಾತ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಮಗು ಗಂಭೀರವಾಗಿ ಗಾಯಾಗೊಂಡಿದ್ದು, ಅದನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನಾಂಕ 11/01/2021 ರ ಸಂಜೆ 6:02 ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಪಂಚಾಯತ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ತಿಪ್ಪಗಾನಹಳ್ಳಿಯ ಸಾಗರ್ (18), ಹಾಗೂ ಹಾಡೋನಹಳ್ಳಿಯ ನಿವಾಸಿ (40) ಸಾವನ್ನಪ್ಪಿದ್ದಾರೆ. ಅತಿ ವೇಗವೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.