ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಡರಹಳ್ಳಿ ಪೊಲೀಸ್ ಠಾಣೆ
🎬 Watch Now: Feature Video

ಬೆಂಗಳೂರು : ಲಾಕ್ಡೌನ್ ಸಮಯದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದ ಮುನ್ನೇಶ್ವರ ನಗರದಲ್ಲಿ ನಡೆದಿದೆ. ಈ ಕುರಿತು ಬೈಕ್ ಮಾಲೀಕ ರವಿಕುಮಾರ್ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬೈಕ್ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.