ಸಿದ್ಧಗಂಗಾ ಮಠದಲ್ಲಿ ಸರಳವಾಗಿ ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನಾಚರಣೆ - Birthday celebration of Sri Shivakumara Swamiji
🎬 Watch Now: Feature Video
ತುಮಕೂರು: ಸಿದ್ದಗಂಗಾಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 114ನೇ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು. ಕೊರೊನಾ ಸೋಂಕು ಹರಡುವಿಕೆ ಭೀತಿ ನಡುವೆ ಪ್ರತಿಯೊಬ್ಬರಿಗೂ ಮಾಸ್ಕ್ ಧರಿಸಿ ಮಠಕ್ಕೆ ಬರುವಂತೆ ಸೂಚಿಸಲಾಗಿತ್ತು. ಜನ್ಮದಿನದ ಅಂಗವಾಗಿ ಶ್ರೀಗಳ ಗದ್ದುಗೆಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಸಾವಿರಾರು ಭಕ್ತರು ಬೆಳಗ್ಗೆಯಿಂದಲೂ ಸಾಲುಗಟ್ಟಿ ನಿಂತು ಗದ್ದುಗೆ ದರ್ಶನ ಪಡೆದರು. ವಿಶೇಷವಾದ ರುದ್ರಾಕ್ಷಿ ನೀರಿನಲ್ಲಿ ಶಿವಕುಮಾರ ಸ್ವಾಮೀಜಿ ಪ್ರತಿಮೆ ಇಟ್ಟು ಮಠದ ಆವರಣದಲ್ಲಿ ಮೆರವಣಿಗೆ ಮಾಡಲಾಯಿತು.