ಉಪ ಚುನಾವಣೆಯಲ್ಲಿ ಮೇಲುಗೈ: ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ - karnataka By-election news
🎬 Watch Now: Feature Video

ಮೈಸೂರು: ರಾಜ್ಯ ಉಪ ಚುನಾವಣೆಯ ಒಟ್ಟು 15 ಕ್ಷೇತ್ರಗಳಲ್ಲಿ 12ರಲ್ಲಿ ಗೆದ್ದ ಹಿನ್ನೆಲೆಯಲ್ಲಿ ಮೈಸೂರಿನ ಬಿಜೆಪಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖ ಮುಖಂಡರಿಗೆ ಜೈಕಾರ ಕೂಗಿ, ಮತ್ತೆ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ ಎಂದು ಖುಷಿಪಟ್ಟರು.