ಬೆಳಗಾವಿಯಲ್ಲಿ ಮಂಗಲಾ ಅಂಗಡಿ ಗೆಲುವು ನಿಶ್ಚಿತ: ಎಂ.ಬಿ.ಜಿರಲಿ - BJP candidate Mangala angadi news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11232340-thumbnail-3x2-news.jpg)
ಬೆಳಗಾವಿ: ಈ ಹಿಂದೆ ದಿ. ಸುರೇಶ ಅಂಗಡಿಯವರು ಗೆದ್ದಿರುವುದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿಯವರ ಗೆಲುವು ನಿಶ್ಚಿತ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜಿರಲಿ ಹೇಳಿದ್ದಾರೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಸಂಬಂಧ ಸದಾಶಿವನಗರದ ದಿ.ಸುರೇಶ ಅಂಗಡಿಯವರ ಲಕ್ಷ್ಮೀ ಕಾಂಪ್ಲೆಕ್ಸ್ನಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಮಾಧ್ಯಮದವರ ಜೊತೆಗೆ ಅವರು ಮಾತನಾಡಿದರು. ಕ್ಷೇತ್ರದ ಎಲ್ಲೆಡೆ ಬಿಜೆಪಿಗೆ ವ್ಯಾಪಕ ಬೆಂಬಲ ಸಿಗುತ್ತಿದೆ. ಕಚೇರಿ ಉದ್ಘಾಟನೆ ಸಂದರ್ಭದಲ್ಲಿಯೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.