ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸುರೇಶ್ ಅಂಗಡಿ - undefined
🎬 Watch Now: Feature Video
ಬೆಳಗಾವಿ: ಸತತ ನಾಲ್ಕನೇ ಬಾರಿ ಸಂಸದರಾಗಿ ಆಯ್ಕೆಯಾದ ಬೆಳಗಾವಿ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ತಮ್ಮ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಮೆಚ್ಚಿ ಜನರು ನನಗೆ ಆಶಿರ್ವಾದ ಮಾಡಿದ್ದಾರೆ. ದೇಶದಲ್ಲಿ ಹಿಂದೆ ಅಭದ್ರ ಸರ್ಕಾರಗಳ ಆಡಳಿತದಿಂದ ತುಂಬಾ ಹಾನಿಯಾಗಿತ್ತು. ಅದಕ್ಕಾಗಿ ದೇಶದ ಜನ ಒಬ್ಬ ಉತ್ತಮ ನಾಯಕನನ್ನು ಆಯ್ಕೆ ಮಾಡಿದ್ದಾರೆ. ನನ್ನ ಗೆಲುವಿಗೆ ಕಾರಣರಾದ ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ಸುರೇಶ್ ಅಂಗಡಿ ಅಭಿನಂದನೆ ಸಲ್ಲಿಸಿದ್ದಾರೆ.