ವರ್ಚುವಲ್ ರ‍್ಯಾಲಿ ಮೂಲಕ ಕೋಟ್ಯಾಂತರ ಜನರನ್ನು ತಲುಪಲಿದ್ದೇವೆ: ರವಿಕುಮಾರ್ - ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7613222-734-7613222-1592129900392.jpg)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಕೇಂದ್ರ ಬಿಜೆಪಿ ಸರ್ಕಾರ ಮೊದಲ ವರ್ಷ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಕರ್ನಾಟಕ ಜನಸಂವಾದ ವರ್ಚುವಲ್ ರ‍್ಯಾಲಿ ಮೂಲಕ ರಾಜ್ಯದ ಜನರ ಮುಂದಿಡಲಾಗುತ್ತಿದೆ. ಒಂದು ಕೋಟಿಗೂ ಹೆಚ್ಚಿನ ಜನರನ್ನು ತಲುಪುವ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಬಿ ನಡ್ಡಾ ವರ್ಚುವಲ್ ರ‍್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಜ್ಯದಿಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಇದರ ಸಿದ್ಧತೆ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಈಟಿವಿ ಭಾರತದ ಜೊತೆ ಮಾತನಾಡಿದ್ದಾರೆ.
Last Updated : Jun 14, 2020, 11:04 PM IST