ಬೆಂಗಳೂರಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ತುರ್ತು ಸೇವೆಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರ - coronavirus in karnataka
🎬 Watch Now: Feature Video
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಡೆತಕ್ಕೆ ಸಿಲಿಕಾನ್ ಸಿಟಿ ಅಕ್ಷರಶಃ ನಿಶಬ್ದವಾಗಿದೆ. ಮೆಟ್ರೊ, ಬಿಎಂಟಿಸಿ, ಕೆಎಸ್ಆರ್ಟಿಸಿ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಎಮರ್ಜೆನ್ಸಿಗೆ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಿತ್ತು. ಸದ್ಯ ಆರೋಗ್ಯ ಇಲಾಖೆಯ ಸೂಚನೆ ಮೇರೆಗೆ ಬಿಎಂಟಿಸಿ ತುರ್ತು ಸಾರಿಗೆ ವ್ಯವಸ್ಥೆಗಾಗಿ ಪ್ರತಿ ಘಟಕದಿಂದ ಹತ್ತು ಬಸ್ಗಳ ಸಂಚಾರ ವ್ಯವಸ್ಥೆಯನ್ನು ಪ್ರಾರಂಭಿಸಿದೆ. ಈ ಕುರಿತು ಈಟಿವಿ ಭಾರತ ಜೊತೆ ಬಿಎಂಟಿಸಿ ಚಾಲಕರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.