ಬೆಂಗಳೂರಿನ ಫುಟ್ಪಾತ್ನಲ್ಲಿ ನಿಂತಿದ್ದ ಪಾದಚಾರಿಗಳ ಮೇಲೆ ಹರಿದ ಕಾರು.. ಭಯಾನಕ ದೃಶ್ಯ ಸೆರೆ - Car accident in banglore
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4172762-962-4172762-1566148723762.jpg)
ಬೆಂಗಳೂರು:ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿ ಕುಡಿದ ಅಮಲಿನಲ್ಲಿ ಕಾರಿನ ಚಾಲಕನೊಬ್ಬ ಫುಟ್ಪಾತ್ನಲ್ಲಿ ನಿಂತಿದ್ದ ಪಾದಚಾರಿಗಳ ಮೇಲೆ ಕಾರು ಹರಿಸಿರುವ ಘಟನೆ ನಡೆದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಗುದ್ದಿದ ರಭಸಕ್ಕೆ ಏಳೆಂಟು ಮಂದಿ ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಗೌರವ್ ಹಾಗೂ ಶಂಕರ್ ಎಂಬುವರು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪೊಲೀಸರು ಕಾರು ಚಾಲಕನನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Last Updated : Aug 18, 2019, 10:50 PM IST