ಕೋವಿಡ್ ಸೋಂಕಿತನಾಗಿದ್ದೇನೆ ಆತಂಕ ಪಡಬೇಡಿ: ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ ಸಂದೇಶ - B. Devadasa Shetty Latest News
🎬 Watch Now: Feature Video
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ (ಬುಡಾ) ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಈ ಕುರಿತು ವರದಿಯಾಗಿತ್ತು. ಇಂದು ಅವರು ವಿಡಿಯೋ ಮೂಲಕ ಸಂದೇಶವೊಂದನ್ನು ಹರಿಬಿಟ್ಟಿದ್ದು, ಸಾರ್ವಜನಿಕರು ಭಯ ಭೀತರಾಗುವ ಅಗತ್ಯವಿಲ್ಲ ಎಂದಿದ್ದಾರೆ. ಕೋವಿಡ್ ಬಗ್ಗೆ ಎಚ್ಚರವಿರಲಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ನಾನೂ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಭೀತಿ ಬೇಡ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ. ಬಂಟ್ವಾಳ ಬಿಜೆಪಿಯಲ್ಲಿ ಸಕ್ರಿಯವಾಗಿರುವ ದೇವದಾಸ ಶೆಟ್ಟಿ ಅವರು ನಿಕಟಪೂರ್ವ ಕ್ಷೇತ್ರಾಧ್ಯಕ್ಷರಾಗಿದ್ದು, ಶಾಸಕರ ಆಪ್ತರೂ ಹೌದು. ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಶಾಸಕರ ಕಚೇರಿಯಲ್ಲೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
Last Updated : Jul 6, 2020, 10:38 AM IST