ವಿಜಯಪುರದ ವಿಮಾನ ನಿಲ್ದಾಣ ಕಾಮಗಾರಿಗೆ ಕೂಡಿ ಬಂದ ಕಂಕಣ - vijayapura Airport Work
🎬 Watch Now: Feature Video
ಪ್ರವಾಸೋದ್ಯಮ ಅಭಿವೃದ್ಧಿಗಾಗಿ ವಿಜಯಪುರದ ಬುರುಣಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ವಿಮಾನ ನಿಲ್ದಾಣ ಕಾಮಗಾರಿಗೆ ಕಡೆಗೂ ಕಂಕಣ ಕೂಡಿ ಬಂದಿದೆ. ದಶಕದಿಂದ ಇದಕ್ಕಾಗಿ ಹೋರಾಟಗಳು ನಡೆದಿದ್ದರೂ ಸಹ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಕಾಲ ದೂಡುತ್ತಲೇ ಬರಲಾಗುತ್ತಿತ್ತು. ಸದ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಪಾಲಿನ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ ಬೆನ್ನಲ್ಲೇ ಡಿಸಿ ಒಟ್ಟು ವೆಚ್ಚದ ಪ್ರಸ್ತಾವನೆ ಸಲ್ಲಿಸಿದ್ದಾರೆ.