ಬಂದ್ ಹಿನ್ನೆಲೆ ಕಲಬುರಗಿಯಲ್ಲಿ ಬಸ್ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ - ಕರ್ನಾಟಕ ಬಂದ್
🎬 Watch Now: Feature Video
ಕಲಬುರಗಿ: ಕರ್ನಾಟಕ ಬಂದ್ ಹಿನ್ನೆಲೆ ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ಮುಂದೆ ವಿವಿಧ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ತಾತ್ಕಾಲಿಕವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೇರೆ ಬೇರೆ ಊರುಗಳಿಗೆ ತೆರಳಬೇಕಾದ ಪ್ರಯಾಣಿಕರು ನಿಲ್ದಾಣದಲ್ಲೇ ಬೆಳಗ್ಗೆ 6 ಗಂಟೆಯಿಂದ ಕಾದು ಕುಳಿತಿದ್ದಾರೆ. ಇನ್ನೊಂದೆಡೆ ಅಂಗಡಿ, ಹೋಟೆಲ್ಗಳೂ ಕ್ಲೋಸ್ ಆಗಿದ್ದು, ಊಟ-ಉಪಹಾರ ಸಿಗದೆ ಪ್ರಯಾಣಿಕರು ಪರದಾಡುವಂತಾಗಿದೆ.