ಮಾ. 26ರಂದು ಭಾರತ್ ಬಂದ್‌ಗೆ ಕರೆ: ಬೆಂಬಲಿಸುವಂತೆ ಬಡಗಲಪುರ ನಾಗೇಂದ್ರ ಮನವಿ - ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಮಾರ್ಚ್ 26 ರಂದು ಭಾರತ್ ಬಂದ್
🎬 Watch Now: Feature Video
ಬೆಂಗಳೂರು: ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಮಾರ್ಚ್ 26ರಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಭಾರತ್ ಬಂದ್‌ಗೆ ಕರೆ ನೀಡಿದೆ. ದೆಹಲಿ ರೈತರನ್ನ ಬೆಂಬಲಿಸುವ ನಿಟ್ಟಿನಲ್ಲಿ ರಾಜ್ಯದಲ್ಲೂ ಬಂದ್‌ಗೆ ಬೆಂಬಲ ನೀಡಲಾಗುತ್ತಿದೆ. ರೈತ ಮುಖಂಡರು, ರಾಜ್ಯದ ಎಲ್ಲಾ ನಾಗರಿಕರು ಬಂದ್‌ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಲಾಗಿದೆ. ಈ ಕುರಿತು ಮಾತನಾಡಿದ ರೈತ ಮುಖಂಡ ಬಡಗಲಪುರ ನಾಗೇಂದ್ರ, ಮಾರ್ಚ್ 26ಕ್ಕೆ ದೆಹಲಿ ಸುತ್ತಮುತ್ತ ರೈತರ ಚಳುವಳಿ ಆರಂಭವಾಗಿ 4 ತಿಂಗಳು ಕಳೆಯುತ್ತೆ. ಆದ್ರೆ ಕೇಂದ್ರ ಸರ್ಕಾರ ಮಾತ್ರ ರೈತರ ಹೋರಾಟಕ್ಕೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಸಂಯುಕ್ತ ಕಿಸಾನ್ ಮೋರ್ಚಾ ಭಾರತದಾದ್ಯಂತ ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆ ರಾಜ್ಯದ ಎಲ್ಲಾ ನಾಗರಿಕರು ಬಂದ್‌ಗೆ ಬೆಂಬಲ ಸೂಚಿಸಬೇಕು. ಜೊತೆಗೆ ವ್ಯಪಾರಸ್ಥರು, ಕಾರ್ಮಿಕರು, ಆಟೋ ಚಾಲಕರು ಸೇರಿದಂತೆ ಎಲ್ಲಾ ಉದ್ದಿಮೆಗಳು ಸ್ವಯಂಪ್ರೇರಿತರಾಗಿ ಬಂದ್‌ಗೆ ಬೆಂಬಲ ಸೂಚಿಸಬೇಕು. ಬೆಂಬಲ ಸೂಚಿಸುವ ಮೂಲಕ ಅನ್ನದಾತರಿಗೆ ಒತ್ತಾಸೆಯಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.