ಅತ್ಯಾಚಾರ ಖಂಡಿಸಿ ಪ್ರಗತಿಪರ ಸಂಘಟನೆಗಳಿಂದ ಮೆಣದಬತ್ತಿ ಹೊತ್ತಿಸಿ ಪ್ರತಿಭಟನೆ - shimogga Candle protest

🎬 Watch Now: Feature Video

thumbnail

By

Published : Oct 3, 2020, 10:37 PM IST

ಶಿವಮೊಗ್ಗ: ಯುಪಿಯ ಹಥ್ರಾಸ್​ನಲ್ಲಿ ನಡೆದ ದಲಿತ ಯುವತಿ ಅತ್ಯಾಚಾರ ಖಂಡಿಸಿ ನಗರದ ಗೋಪಿ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳಿಂದ ಮೆಣದಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಅತ್ಯಾಚಾರ ತಡೆಗಟ್ಟುವಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಹಾಗಾಗಿ ರಾಷ್ಟ್ರಪತಿಗಳು ಯೋಗಿ ಆದಿತ್ಯನಾಥ್​ ಸರ್ಕಾರವನ್ನು ವಜಾಗೊಳಿಸಬೇಕು ಹಾಗೂ ಅತ್ಯಾಚಾರ ಎಸಗಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಯ ಮುಖಂಡರಾದ ಶ್ರೀಪಾಲ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಗುರುಮೂರ್ತಿ, ಸಾಹಿತಿ ಪ್ರೋ ರಾಜೇಂದ್ರ ಚೆನ್ನಿ ಹಾಗೂ ವಿವಿಧ ಧರ್ಮಗಳ ಗುರುಗಳು ಉಪಸ್ಥಿತರಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.