ನೆಲಮಂಗಲ: ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ.. - Leopard Captured nelamangala
🎬 Watch Now: Feature Video
ಸಾಕಷ್ಟು ದಿನದಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದು, ನೆಲಮಂಗಲ ತಾಲೂಕಿನ ತೊರೆಕೆಂಪೋಹಳ್ಳಿ ಗ್ರಾಮದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಊರ ಹೊರಗೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ತೊರೆಕೆಂಪೋಹಳ್ಳಿ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಲವು ದಿನದಿಂದ ಚಿರತೆ ಉಪಟಳ ನೀಡುತ್ತಿತ್ತು. ಇದರಿಂದ ಬೇಸತ್ತಿದ್ದ ಜನರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ
ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಗ್ರಾಮದ ಹೊರಗೆ ಬೋನ್ ಇಡಲಾಗಿದ್ದು, ಈ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ನೆಲಮಂಗಲ ವಲಯದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.