ಹೊಸಪೇಟೆಯಲ್ಲಿ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಜನತೆ - hospete Leopard Captured
🎬 Watch Now: Feature Video
ಹೊಸಪೇಟೆ: ತಾಲೂಕಿನ ಹೆಚ್ಪಿಸಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿನಲ್ಲಿ ಚಿರತೆ ಸೆರೆ ಸಿಕ್ಕಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆ ಕೆಲವು ದಿನಗಳ ಹಿಂದೆ ಜಾನುವಾರುಗಳು ಮತ್ತು ನಾಯಿಗಳನ್ನು ಹೊತ್ತೊಯ್ದಿದಿತ್ತು. ಇದರಿಂದ ಆತಂಕದಲ್ಲಿದ್ದ ಗ್ರಾಮಸ್ಥರು ಚಿರತೆ ಸೆರೆಗಾಗಿ ಬೋನ್ ಅಳವಡಿಸಲು ಆಗ್ರಹಿಸಿದ್ದರು. ಇದೀಗ ಚಿರತೆ ಸೆರೆಯಿಂದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.