ಹೊತ್ತಿ ಉರಿದ ಕಾರು... ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರು - ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ
🎬 Watch Now: Feature Video
ಕಲಬುರಗಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲಬುರಗಿ ಜಿಲ್ಲಾಸ್ಪತ್ರೆಯ ಮುಂದೆ ಈ ಘಟನೆ ನಡೆದಿದೆ. ಐ 20 ಕಾರಿನ ಎಂಜಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರು ಕೆಳಗಿಳಿದಿದ್ದಾರೆ. ಆ ಬಳಿಕ ಕೆಲ ಹೊತ್ತಿನಲ್ಲೇ ಕಾರು ಹೊತ್ತಿ ಉರಿದಿದೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.