ಡೀಸೆಲ್ ಹಾಕಿಸಲು ಬಂದಾಗ ಹೊತ್ತಿ ಉರಿದ ಕಾರು... ತಪ್ಪಿದ ಭಾರೀ ಅನಾಹುತ - ಕಾರಿಗೆ ಬೆಂಕಿ ತಗುಲಿ
🎬 Watch Now: Feature Video
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಇಂಡಿಪಂಪ್ನಲ್ಲಿನ ಪೆಟ್ರೋಲ್ ಬಂಕ್ನಲ್ಲಿ ಕಾರಿಗೆ ಬೆಂಕಿ ತಗುಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೆಟ್ರೋಲ್ ಬಂಕ್ನಲ್ಲಿ ಡೀಸೆಲ್ ಹಾಕಿಸಲು ಬಂದಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸುಟ್ಟು ಕರಕಲಾಗಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ.