ಮಹಾಮಳೆಗೆ ಉಕ್ಕಿ ಹರಿದ ಕಾವೇರಿ: ಜಲಾವೃತಗೊಂಡ ಮನೆಗಳು, ಜನರ ಜೀವನ ಅಸ್ತವ್ಯಸ್ತ - ಜಿಲ್ಲಾಡಳಿತ ಮುನ್ನೆಚ್ಚರಿಕೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4073380-thumbnail-3x2-kdg.jpg)
ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗಾಳಿ-ಮಳೆಗೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಜನತೆ ಕಂಗಲಾಗಿದ್ದು, ಸಂತ್ರಸ್ತರಿಗೆ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಅಲ್ಲದೆ ಮಳೆಯಿಂದ ಆಗುವ ಅನಾಹುತಗಳನ್ನು ಎದುರಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದ್ದು, ಅಪಾಯದ ಸ್ಥಳಗಳಲ್ಲಿ ಎನ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜಿಸಿದೆ.