ಶಾಂತಿಯುತವಾಗಿ ಈದ್ ಮಿಲಾದ್ ಆಚರಿಸಿ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಕೆ ಬಾಬಾ ಮನವಿ - Eid Milad in Bellary
🎬 Watch Now: Feature Video

ಬಳ್ಳಾರಿ: ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ಈ ಹಿಂದೆ ಹೇಗೆ ಆಚರಿಸಿಕೊಂಡು ಬಂದಿದ್ದೀರೋ ಅದೇ ರೀತಿಯಲ್ಲಿ ಶಾಂತಿಯುತವಾಗಿ ಆಚರಣೆ ಮಾಡಿ ಎಂದು ಮುಸ್ಲಿಂ ಧಾರ್ಮಿಕ ಮುಖಂಡರು ಮತ್ತು ಸಾರ್ವಜನಿಕರಿಗೆ ಬಳ್ಳಾರಿ ಎಸ್ಪಿ ಸಿ.ಕೆ ಬಾಬಾ ಕರೆ ನೀಡಿದ್ದಾರೆ. ನಗರದ ಜಿಲ್ಲಾ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಈಟಿವಿ ಭಾರತ್ನೊಂದಿಗೆ ಮಾತನಾಡಿದ ಅವರು ನ. 10 ರಂದು ಬಳ್ಳಾರಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈದ್ ಮಿಲಾದ್ ಆಚರಣೆ ಮಾಡುತ್ತಿದ್ದಾರೆ. ಆದರೆ ಸಿರುಗುಪ್ಪ ತಾಲೂಕಿನಲ್ಲಿ ಮಾತ್ರ ಟಿಪ್ಪು ಜಯಂತಿಯನ್ನು ಖಾಸಗಿ ಕಾರ್ಯಕ್ರಮವಾಗಿ ಆಚರಣೆ ಮಾಡುತ್ತಾರೆ. ಇದಕ್ಕೆ ಪೊಲೀಸ್ ಇಲಾಖೆಯಿಂದ ಭದ್ರತೆಯನ್ನು ಒದಗಿಸುತ್ತೇವೆ ಎಂದು ತಿಳಿಸಿದರು.