ಮಹದಾಯಿ ಅಧಿಸೂಚನೆ: ಬಿಜೆಪಿಯಿಂದ ಗದಗದಲ್ಲಿ ಸಂಭ್ರಮಾಚರಣೆ - celebration mood in gadaga
🎬 Watch Now: Feature Video
ಮಹದಾಯಿ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಸಿದ ಹಿನ್ನೆಲೆ ಉತ್ತರ ಕರ್ನಾಟಕ ಭಾಗದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಗದದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ನಗರದ ಮುಳಗುಂದ ನಾಕಾ ಬಳಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪರಸ್ಪರ ಸಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಹಿಳಾ ಕಾರ್ಯಕರ್ತರು ಸಹ ಭಾಗವಹಿಸಿ ಬಿಜೆಪಿ ಸರ್ಕಾರದ ಪರವಾಗಿ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.