ಡಾ. ದೇವಿ ಪ್ರಸಾದ್ ಶೆಟ್ಟಿ ಅವರನ್ನು ಭೇಟಿ ಮಾಡಿದ ಕೇಂದ್ರ ಸಚಿವ ಹರ್ಷವರ್ಧನ್ - ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್
🎬 Watch Now: Feature Video
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ್ದು, ಈ ಬಗ್ಗೆ ಜನಸಾಮಾನ್ಯರು ಹಾಗೂ ಗಣ್ಯರಿಂದ ಅಭಿಪ್ರಾಯ ಸಂಗ್ರಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಇಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್, ಬೆಂಗಳೂರಿನ ನಾರಾಯಣ ಹೃದಯಾಲಯ ವೈದ್ಯರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರನ್ನು ಭೇಟಿ ಮಾಡಿದರು. ಅಚಿವರಿಗೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಗೂ ಸಂಸದ ಪಿ.ಸಿ.ಮೋಹನ್ ಸಾಥ್ ನೀಡಿದರು.