ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿದ ಸಕಲೇಶ್ವರಸ್ವಾಮಿ ದಿವ್ಯ ರಥೋತ್ಸವ - Sakleshwaraswamy Divya Rathotsavam celebration
🎬 Watch Now: Feature Video

ಸಕಲೇಶಪುರ: ಸಕಲೇಶ್ವರಸ್ವಾಮಿ ದಿವ್ಯ ರಥೋತ್ಸವವು ಭಾನುವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಜಾತ್ರೋತ್ಸವದ ಅಂಗವಾಗಿ ಗುರುವಾರದಿಂದಲೇ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿವಿಧ ಪೂಜೆ ಕೈಂಕರ್ಯಗಳು ಆರಂಭಗೊಂಡಿದ್ದು, ಶನಿವಾರ ಸಕಲೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ಬ್ರಾಹ್ಮಣರ ಬೀದಿಯಲ್ಲಿ ಮೆರವಣಿಗೆ ನಡೆಸಿ, ನಂತರ ಘಳಿಗೆ ತೇರನ್ನು ಎಳೆಯಲಾಗಿತ್ತು. ಭಾನುವಾರ ನಡೆದ ವಿವಿಧ ಪೂಜೆ ಕಾರ್ಯಗಳ ನಂತರ 12 ಗಂಟೆಗೆ ಸರಿಯಾಗಿ ದಿವ್ಯ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಬ್ರಾಹ್ಮಣರ ಬೀದಿ ಮೂಲಕ ಮುಖ್ಯರಸ್ತೆಯಲ್ಲಿ ಪುರಸಭೆವರೆಗೆ ಎಳೆದು ನಂತರ ಸಂಜೆ ಏಳು ಗಂಟೆಯ ಹೊತ್ತಿಗೆ ರಥವನ್ನು ಹಿಂತಿರುಗಿ ಎಳೆದು ತಂದು ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.