13 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖತರ್ನಾಕ್ ಕಳ್ಳ ಅಂದರ್! - Theft arrest
🎬 Watch Now: Feature Video
ಬೆಂಗಳೂರು: ಗಮನ ಬೇರೆಡೆ ಸೆಳೆದು ಹಣ ಕಳವು ಮಾಡುತ್ತಿದ್ದ ಆರೋಪಿಯನ್ನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಓಜಿ ಕುಪ್ಪಂ ಗ್ಯಾಂಗ್ನ ರತ್ನಕುಮಾರ್ ಅಲಿಯಾಸ್ ರತ್ನಂ ಬಂಧಿತ ಆರೋಪಿ. ಈತ ತಮಿಳುನಾಡಿನ ತಿರುವೆಟ್ಟೂರು ಮೂಲದವನಾಗಿದ್ದು, ಈತನಿಂದ 10 ಲಕ್ಷದ 25 ಸಾವಿರ ನಗದು, ಕೃತ್ಯಕ್ಕೆ ಬಳಸಿದ್ದ 3 ದ್ವಿಚಕ್ರ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಆರೋಪಿ ರತ್ನಂ ಬಂಧನದಿಂದ ಒಟ್ಟು 13 ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಂಗಳೂರಿನ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಆರೋಪಿ ಕಳ್ಳತನ ಮಾಡಿದ್ದು, ಪೊಲೀಸರು ಈತನಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.