ಗದಗದಲ್ಲಿ ಅದ್ಧೂರಿಯಾಗಿ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ - shivaji- jayanti-celebration
🎬 Watch Now: Feature Video

ಗದಗ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಗದಗದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಶ್ರೀರಾಮ ಸೇನೆ ಕಾರ್ಯಕರ್ತರು ಭವ್ಯವಾದ ಶಿವಾಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಗರದ ಜೋಡು ಮಾರುತೇಶ್ವರ ದೇವಸ್ಥಾನದಿಂದ ಮುನ್ಸಿಪಲ್ ಕಾಲೇಜ್ ಮೈದಾನದವರೆಗೆ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.