ದೊಡ್ಡ ಕೆರೆ ಏರಿ ಬಿರುಕು... ಆತಂಕದಲ್ಲಿ ಚಿಕ್ಕಮಗಳೂರು ಜನತೆ - ಚಿಕ್ಕಮಗಳೂರು ಲೆಟೆಸ್ಟ್ ನ್ಯೂಸ್
🎬 Watch Now: Feature Video
ಕೆರೆ ಏರಿಯ ರಸ್ತೆ ಮೇಲೆ ಭಾರೀ ಪ್ರಮಾಣದಲ್ಲಿ ಬಿರುಕು ಬಿಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಹೌದು, ಚಿಕ್ಕಮಗಳೂರು ನಗರದ ಹೊರವಲಯದ ಹಿರೇಮಗಳೂರು ದೊಡ್ಡ ಕೆರೆ ಏರಿ ಒಡೆಯುವ ಭೀತಿ ಎದುರಾಗಿದ್ದು, ಕೆರೆ ಏರಿ ಮೇಲಿರುವ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಬಿರುಕು ಕಾಣಿಸಿಕೊಂಡಿದೆ. ಒಂದು ವೇಳೆ ಕೆರೆ ಒಡೆದರೆ ಬೆಳೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿ ನೂರಾರು ರೈತರಿದ್ದು, ಈ ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರು ಭಯ ಪಡುವಂತಾಗಿದೆ. ಕೆರೆ ಏರಿಯ ಮೇಲೆ ಉದ್ದಕ್ಕೂ ರಸ್ತೆ ಬಿರುಕು ಬಿಟ್ಟಿದ್ದು, ಕೆಲ ಭಾಗದಲ್ಲಿ ಕುಸಿತ ಉಂಟಾಗಿದೆ.
Last Updated : Sep 11, 2020, 11:40 AM IST