ಬಜೆಟ್ ಬಗ್ಗೆ ಚಿಕ್ಕಬಳ್ಳಾಪುರ ಜನರ ಪ್ರತಿಕ್ರಿಯೆ - ಎತ್ತಿನಹೊಳೆ ಯೋಜನೆಗೆ 1500 ಕೋಟಿ ಅನುದಾನ ಬಿಡುಗಡೆ
🎬 Watch Now: Feature Video

ಚಿಕ್ಕಬಳ್ಳಾಪುರ: ಬಜೆಟ್ಗೂ ಮುಂಚಿತವಾಗಿ ರೈತಪರ ಬಜೆಟ್ ಎಂದು ಘೋಷಣೆ ಮಾಡಿದ್ದ ಯಡಿಯೂರಪ್ಪ ಉತ್ತಮ ಬಜೆಟ್ ಘೋಷಣೆ ಮಾಡುವುದರಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಚಿಕ್ಕಬಳ್ಳಾಪುರ ಜನತೆ ಅಭಿಪ್ರಾಯಪಟ್ಟಿದ್ದಾರೆ. ಎತ್ತಿನಹೊಳೆ ಯೋಜನೆಗೆ ಈಗಾಗಲೇ 12 ಸಾವಿರ ಕೋಟಿಗೂ ಅಧಿಕ ಹಣವನ್ನು ಮೀಸಲಿಟ್ಟಿದ್ದು, ಈಗ ಮತ್ತೆ 1500 ಕೋಟಿ ಅನುದಾನ ಮೀಸಲಿಟ್ಟಿದ್ದು ಬೇಸರ ತಂದಂತಾಗಿದೆ. ಇನ್ನು ರೈತರ ಸಾಲದ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.