ಚಿಕ್ಕಮಗಳೂರಿನಲ್ಲಿ ಹೇಗಿದೆ ಕೊರೊನಾ ಸ್ಥಿತಿಗತಿ: ಇಲ್ಲಿದೆ ಗ್ರೌಂಡ್ ರಿಪೋರ್ಟ್ - ಚಿಕ್ಕಮಗಳೂರು ಕೊರೊನಾ ಮಾಹಿತಿ
🎬 Watch Now: Feature Video

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ 42 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 616 ಆಗಿದೆ. ಶನಿವಾರ 62 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 376 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಶನಿವಾರ ಚಿಕ್ಕಮಗಳೂರು ತಾಲೂಕಿನಲ್ಲಿ 21, ಕಡೂರು ತಾಲೂಕಿನಲ್ಲಿ 15, ತರೀಕೆರೆ ತಾಲೂಕಿನಲ್ಲಿ 4, ಎನ್ ಆರ್ ಪುರ ತಾಲೂಕಿನಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಸದ್ಯ 223 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಜಿಲ್ಲೆಯಲ್ಲಿ 17 ಜನ ಸೋಂಕಿಗೆ ಬಲಿಯಾಗಿದ್ದಾರೆ. ಹೊಸ ಪ್ರಕರಣಗಳು ಪತ್ತೆಯಾದ ಪ್ರದೇಶಗಳನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸೀಲ್ ಡೌನ್ ಮಾಡಿದೆ.