ಬೀದರ್​​: ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ... ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ - ಚಿಟಗುಪ್ಪ ಬೀದರ್​ ಲೆಟೆಸ್ಟ್ ನ್ಯೂಸ್

🎬 Watch Now: Feature Video

thumbnail

By

Published : Sep 18, 2020, 6:58 AM IST

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಲಕ್ಷಾಂತರ(35 ಲಕ್ಷ) ರೂ. ಮೌಲ್ಯದ ಬಟ್ಟೆ ಸಾಮಾಗ್ರಿಗಳು ಅಗ್ನಿಗಾಹುತಿಯಾದ ಘಟನೆ ಬೀದರ್​​ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿಟಗುಪ್ಪ ಪಟ್ಟಣದ ಗಾಂಧಿ ವೃತ್ತದಲ್ಲಿರುವ ಅಬ್ದುಲ್ ನಬಿ ಎಂಬುವರಿಗೆ ಸೇರಿದ ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಬೆಂಕಿ ಧಗ-ಧಗನೆ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಸಿಪಿಐ ಶರಣಬಶವೇಶ್ವರ ಭಜಂತ್ರಿ, ಪಿಎಸ್​ಐ ಸುರೇಶ ಭೇಟಿ ನೀಡಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರೂ ಕೂಡ ಪ್ರಯೋಜನವಾಗಿಲ್ಲ. ಅಷ್ಟೇ ಅಲ್ಲದೆ ಬಟ್ಟೆ ಅಂಗಡಿ ಪಕ್ಕದಲ್ಲೇ ಇದ್ದ ಟೈಲರ್ ಅಂಗಡಿಗೂ ಕೂಡ ಬೆಂಕಿ ಆವರಿಸಿಕೊಂಡಿದೆ. ಸದ್ಯ ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.